*ಶ್ರೀ ಕ್ಷೇತ್ರ ಇಂಚಗೇರಿ ಮಠ* ಭಾಗ (6)
 ಶ್ರೀ ಸ.ಸ ಶಿವಪ್ರಭು ಮಹಾರಾಜರು
ಶ್ರೀ ಸ.ಸ ಶಿವಪ್ರಭು ಮಹಾರಾಜರ ಅಖಂಡ ತಪಸ್ವಿ & ಶ್ರೀ ಗಿರಿಮಲ್ಲೇಶ್ವರ ಮಹಾರಾಜರ ಪರಮ ಅನುಯಾಯಿ. ಶ್ರೀ ಮಹಾದೇವರು ಶ್ರೀ ಗಿರಿಮಲ್ಲೇಶ್ವರ ಮಹಾರಾಜರಿಂದ ಉಪದೇಶ ಪಡೆದುಕೊಂಡು ಕರ್ನಾಟಕ-ಮಹಾರಾಷ್ಠ್ರ ಪ್ರಚಾರವನ್ನು ಕೈಗೊಂಡರು. ಶ್ರೀ ಸದ್ಗುರು ಸಮರ್ಥ ಶಿವಪ್ರಭು ಮಹಾರಾಜರು ಬ್ರಹ್ಮಲೀನಗೋಂಡನಂತರ ಶ್ರೀ ಕ್ಷೇತ್ರ ಇಂಚಗೇರಿ ಮಠದ ಜವಾಬ್ದಾರಿ ಹೊತ್ತ ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭೂಜಿಯವರು ದೇಶದ ಸ್ವಾತಂತ್ರ್ಯ ಹೋರಾಟ, ಸಂಸ್ಢಾನಗಳ ವಿಲೀನಿಕರಣ, ಕರ್ನಾಟಕ ಏಕೀಕರಣ ಹೋರಾಟದಲ್ಲಿ ಭಾಗವಹಿಸಿ ಇಂಚಗೇರಿ ಮಠವನ್ನು ನಿಜವಾದ ಆಧ್ಯಾತ್ಮ ಶಕ್ತಿ ಕೇಂದ್ರ ಹಾಗೂ ಸರ್ವೋದಯದ ಕೇಂದ್ರವನ್ನಾಗಿ ಮಾರ್ಪಡಿಸಿದರು. . ಗಾಂಧೀಜಿಯವರ ಗ್ರಾಮಸ್ವರಾಜ್ಯ , ವಿನೋಬಾಜಿಯವರ ಸರ್ವೋದಯ ಕಲ್ಪನೆ ಹಾಗೂ ಶರಣ ಜ್ಙಾನ ಕ್ರಿಯೆಗಳ ಸಮನ್ವಯ ಮಹಾದೇವಪ್ಪನವರ ಮೂಲಸೂತ್ರಗಳಾಗಿದ್ದವು.
ಶ್ರೀ ಮಾಧವಾನಂದ ಪ್ರಭುಜಿ
ಕ್ರಾಂತಿಕಾರಿ ಧ್ಯೇಯಗಳಿಂದ ರಾಷ್ಢ್ರಿಯ ಆಯಾಮವನ್ನು ಪಡೆದು ಕಟು ಸಂಪ್ರದಾಯ ಕಂದಾಚಾರಗಳನ್ನು ಖಂಡಿಸುತ್ತಾ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಶೋಷಿತರ ಪರವಾಗಿ ಹಾಗೂ ಅನ್ಯಾಯಗಳ ವಿರುದ್ಧ ಹೋರಾಟ ನಡೆಸಿದ ಶ್ರೀ ಮಹಾದೇವಪ್ಪನವರಿಂದ ಶ್ರೀ ಕ್ಷೇತ್ರ ಇಂಚಗೇರಿ ಮಠ ದೀನದಲಿತರಿಗೆ ಆಶ್ರಯ ನೀಡಿದ ಆಶ್ರಮವಾಗಿ ಸ್ವತಂತ್ರ್ಯ ನ್ಯಾಯಲವಾಗಿ , ಉದ್ಯೋಗ ಕೇಂದ್ರವಾಗಿ ಕಾಯಕ ತತ್ವದ ಪ್ರತ್ಯೇಕ್ಷ ನಿದರ್ಶನವಾಗಿ ರೂಪುಗೊಂಡಿದ್ದು ಒಂದು ಅದ್ಭುತ ಸಾಧನೆ ಎಂದು ಹೇಳಬಹುದು. "ಯಾರು ಜನತಾ ಜನಾರ್ಧನ ಸೇವೆಯ ಮಡುವುನಲ್ಲಿ ದುಮುಕುವರೊ ಅವರ ಅಮೃತ ಪಾನ ಮಾಡಿ ಅಮರರಾಗುವರು "ಎಂಬುದು ಶ್ರೀ ಸ.ಸ.ಮಹಾದೇವರ ಅಮೃತವಾಣಿಯಾಗಿತ್ತು. ನಿಜವಾದ ಅರ್ಥದಲ್ಲಿ ಶ್ರಿ ಮಹಾದೇವರು ಅಮರ ಜೀವಿಗಳು. ಮಹಾತ್ಮಾಗಾಂಧೀಜಯವರ ಮೊಮ್ಮಗ ಅರುಣಗಾಂಧೀಯವರು ಇಂಪ್ರಿಂಟಿ ಎಂಬ ಪಾಕ್ಷಿಕ ಇಂಗ್ಲಿಷ್ ಪತ್ರಿಕೆಯಲ್ಲಿ ಇಂಚಗೇರಿ ಸಾಂಪ್ರದಾಯದ ಕುರಿತು ತತ್ವಗಳ ಈ ದಿಟ್ಟ ಪ್ರಯೋಗ ನಮ್ಮ ಭಾರತದಾದ್ಯಂತ ಅತಿ ಶೀಘ್ರವಾಗಿ ಕಾರ್ಯಗತವಾಗಲೆಂದು ಆಶಿಸಿ ಬರೆದಿದ್ದಾರೆ.
ಬಾಲ ಬ್ರಹ್ಮಚಾರಿಯಾಗದ್ದ ಮಹಾದೇವರು ತದನಂತರ ದಿನಗಳಲ್ಲಿ ದೇವರು ಹಾಗೂ ಶ್ರೀ ಮಾಧವಾನಂದ ಪ್ರಭುಜೀ ಎಂದೆ ಪ್ರಚಲಿತರಾಗಿ ಭಕ್ತಿ ಪ್ರಚಾರದ ಜತೆಗೆ ಶ್ರೀ ಗುರು ಪುತ್ರೇಶ್ವರ ಮಹಾರಾಜರನ್ನು ತಮ್ಮ ಆಧ್ಯಾತ್ಮದ ಗರಡಿಯಲ್ಲಿ ಪಳಗಿಸಿ, 1980 ರಲ್ಲಿ ಬ್ರಹ್ಮಲೀನರಾದರು.....🙏🚩ಮುಂದುವರೆವದು (ಸಂಗ್ರಹ ಲೇಖನ)