ದಿನಾಂಕ 18-09-2021 ರಂದು ಜನಪ್ರಿಯ ಶಾಸಕರು ಯಮಕನಮರಡಿ ಹಾಗೂ  ಕೆಪಿಸಿಸಿ ಕಾರ್ಯಾಧ್ಯಕ್ಷರಾದ *ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು* ತಮ್ಮ ಕ್ಷೇತ್ರದ ಪಾಶ್ಚಾಪುರ ಗ್ರಾಮದ ಸರ್ಕಾರಿ ಶಾಲೆ, ಕಾಲೇಜು ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಕುಂದುಕೊರತೆಗಳನ್ನು ಪರಿಶೀಲಿಸಿದರು.
ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಶಿಕ್ಷಕರು, ಉಪನ್ಯಾಸಕರು ಹಾಗೂ ಇನ್ನಿತರೇ ಸಿಬ್ಬಂದಿಯ ಕೊರತೆ ಇರುವುದನ್ನು ಗಮನಿಸಿದ ಅವರು ಕೂಡಲೇ ಸಿಬ್ಬಂದಿ ಭರ್ತಿಗೆ ಕ್ರಮಕೈಗೊಳ್ಳಲು ಸೂಚಿಸಿದರು.ನಂತರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಕುಂದುಕೊರತೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಶ್ರೀ ಮಾರುತಿ ಗುಟ್ಟಗುದಿ ಶ್ರೀ ಫಜಲ್ ಅವರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರು ಕಾರ್ಯಕರ್ತರು ಯುವ ಮುಖಂಡರು ಉಪಸ್ಥಿತರಿದ್ದರು.