ಬೆಳಗಾವಿ : ಸವದತ್ತಿ ಯಲ್ಲಮ್ಮ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಸೆಪ್ಟೆಂಬರ್ 28 ರಿಂದ ದೇವಸ್ಥಾನಕ್ಕೆ ಭಕ್ತಾದಿಗಳ ದರ್ಶನಕ್ಕೆ ಅನುಮತಿ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶಿಸಿದ್ದಾರೆ.
ಇನ್ನು ದೇವಿಯ ದರ್ಶನಕ್ಕೆ ಅನುಮತಿ ನೀಡಲಾಗಿದ್ದರೂ, ಉತ್ಸವ, ಜಾತ್ರೆ ಕಾರ್ಯಕ್ರಮಗಳನ್ನ ನಿರ್ಬಂಧಿಸಲಾಗಿದೆ.ಇನ್ನು ದೇಗುಲದಲ್ಲಿ ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸುವಂತೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.
ಅಂದ್ಹಾಗೆ, ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಕಳೆದ 17 ತಿಂಗಳಿಂದ ಭಕ್ತರ ದೇಗುಲ ಪ್ರವೇಶವನ್ನ ನಿರ್ಬಂಧಿಸಿತ್ತು. ಸಧ್ಯ ಸೆಪ್ಟಂಬರ್ 28 ರಿಂದ ದೇವಿ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ.

Social Plugin