ನಾಮದೇವ ಖೋತ 
ರಾಜ್ಯ ಮಟ್ಟಕ್ಕೆ ಆಯ್ಕೆ
ತೇರದಾಳ : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇವರು ನಡೆಸುವ ವಿಶ್ವವಿದ್ಯಾಲಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ಪಟ್ಟಣದ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆ ಬಿಇಡಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ನಾಮದೇವ ಸೋಪಾನ ಖೋತ ಇವರು ಗಣಿತ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ(ಅಂತರ ವಿಶ್ವ ವಿದ್ಯಾಲಯ) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  ಗೋಕಾಕ ಪಟ್ಟಣದ ಜಾರಕಿಹೊಳಿ ಶಿಕ್ಷಣ ಸಂಸ್ಥೆಯಲ್ಲಿ(ಜೆಎಸ್‍ಎಸ್) ದಿ. 27ರಂದು ನಡೆದ ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ವಿವಿಧ ವಿದ್ಯಾ ಸಂಸ್ಥೆಗಳಿಂದ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ತೇರದಾಳ ಪಟ್ಟಣದ ನಾಮದೇವ ಖೋತ ಎಂಬುವವರು ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
  ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಎಮ್.ಎಸ್.ದಾನಿಗೊಂಡ, ಮ್ಯಾನೆಜಿಂಗ ಡೈರೆಕ್ಟರ್ಟಾದ ಡಾ.ಪುಷ್ಪದಂತ ದಾನಿಗೊಂಡ, ಮ್ಯಾನೇಜಿಂಗ್ ಟ್ರಸ್ಟಿಯಾದ ಪ್ರತಿಭಾ ದಾನಿಗೊಂಡ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.