ಪಟ್ಟಣದ ನೂತನ ಪುರಸಭೆ ಅಧ್ಯಕ್ಷರಾಗಿ ಕುಸುಮಾಂಡಿನಿ ಅಲ್ಲಪ್ಪ ಬಾಬಗೊಂಡ ಅವಿರೋಧವಾಗಿ ಆಯ್ಕೆಗೊಂಡರು.
ತೇರದಾಳ : ಪಟ್ಟಣದ ಪುರಸಭೆಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಕುಶಮಾಂಡಿನಿ ಅಲ್ಲಪ್ಪ ಬಾಬಗೊಂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಪುರಸಭೆ ಅಧ್ಯಕ್ಷೆ ಶ್ರೀಮತಿ ಅನ್ನಪೂರ್ಣ ಸದಾಶಿವ ಹೊಸಮನಿ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರೀಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಕುಶಮಾಂಡಿನಿ ಅಲ್ಲಪ್ಪ ಬಾಬಗೊಂಡ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾದ ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ಕುಸುಮಾಂಡಿನಿ ಅಲ್ಲಪ್ಪ ಬಾಬಗೊಂಡ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ಈ ಸಂಧರ್ಭದಲ್ಲಿ ಉಪಸ್ಥಿತ ತೇರದಾಳ ಶಾಸಕ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿದ್ದು ಸವದಿ ಮಾತನಾಡಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಕ್ರೀಯಾಶೀಲ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಾಗಿದ್ದು, ನೂತನ ಅಧ್ಯಕ್ಷರು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಾದರಿ ನಗರ ನಿರ್ಮಾಣದ ಸಂಕಲ್ಪ ತೊಡಬೇಕೆಂದು ತಿಳಿಸಿದ ಅವರು ಪಟ್ಟಣದ ಅಭಿವೃದ್ಧಿಗಾಗಿ ಸರಕಾರದಿಂದ ಅಗತ್ಯ ನೆರವಿನ ಭರವಸೆ ನೀಡಿ ನೂತನ ಅಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಸಹಾಯಕ ಚುನಾವಣಾಧಿಕಾರಿಯಾಗಿ ಎಸ್.ಎಲ್ ಕಾಗಿಯವರ ಕಾರ್ಯನಿರ್ವಹಿಸಿದರು, ಉಪತಹಶೀಲ್ದಾರ ಶ್ರೀಕಾಂತ ಮಾಯನ್ನವರ, ಮುಖ್ಯಾಧಿಕಾರಿ ಅಶೋಕ ಗುಡಿಮನಿ ಸೇರಿದಂತೆ ಮುಖಂಡರು, ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.
Social Plugin