ಕನ್ನಡ ಚಿತ್ರರಂಗಕ್ಕೆ ಕೆ.ಜಿ.ಎಫ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಸಿರುವ "ಕಾಂತಾರ" ಚಿತ್ರದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಹೆಸರಾಂತ ನಟ - ನಿರ್ದೇಶಕ ರಿಷಬ್ ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸಿರುವುಲ್ಲದೆ, ನಾಯಕರಾಗೂ ನಟಿಸಿದ್ದಾರೆ.
ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟುರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

Social Plugin