ತಪ್ಪುಗಳಿಗೆ ಅವಕಾಶ ಮಾಡಿಕೊಡಬೇಡಿ
ರಬಕವಿ-ಬನಹಟ್ಟಿ,ಅ1: ಮತದಾರರ ಪಟ್ಟಿಗೆ ಆಧಾರ ಜೋಡಣೆ ಕಾರ್ಯಕ್ರಮ ಇದೇ 1 ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಮನೆಗೆ ಬರುವ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುವುದರ ಮೂಲಕ ಈ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು. ಮತಗಟ್ಟೆ ಅಧಿಕಾರಿಗಳು ಯಾವುದೆ ತಪ್ಪುಗಳಾಗದಂತೆ ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಮಖಂಡಿ ಉಪವಿಭಾಗಾಧಿಕಾರಿ ಡಾ.ಸಿದ್ದು ಹುಲ್ಲೊಳ್ಳಿ ತಿಳಿಸಿದರು.
ಬನಹಟ್ಟಿಯ ಭದ್ರನವರ ಕಲ್ಯಾಣ ಪಂಟಪದಲ್ಲಿ ಮತದಾರರ ಪಟ್ಟಿಗೆ ಆಧಾರ ಜೋಡಣೆ ಕಾರ್ಯಕ್ರಮದ ನಿಮಿತ್ತವಾಗಿ ಹಮ್ಮಿಕೊಂಡ ಕಾರ್ಯಾಗಾರವನ್ನು ಉದ್ಘಾಟಿಸಿ ಮಾನತಾಡಿದರು. ಈ ಸಂದರ್ಭದಲ್ಲಿ ರಬಕವಿ ಬನಹಟ್ಟಿ ತಹಶೀಲ್ದಾರ್ ಎಸ್.ಬಿ.ಇಂಗಳೆ ಮಾತನಾಡಿ, ಆಧಾರ ಕಾಡ್ನ್ರ್ನು ಹೊಂದದೆ ಇರುವವರು ಮನ್ರೆಗಾ ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯಿಂದ ನೀಡಲಾದ ಪಾಸ್ ಬುಕ್, ಪಾನ್ ಕಾರ್ಡ್, ಇಂಡಿಯನ್ ಪಾಸ್ ಪೆÇೀರ್ಟ್, ಡ್ರೈವಿಂಗ್ ಲೈಸನ್ಸ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಭಾರತದ ಚುನಾವಣಾ ಆಯೋಗದ ಮಹತ್ವದ ಕಾರ್ಯಕ್ರಮ ಇದಾಗಿದೆ. ಆದ್ದರಿಂದ ಸಾರ್ವಜನಿಕರ, ಜನಪ್ರತಿನಿಧಿಗಳ ಮತ್ತು ಪ್ರತಿಯೊಂದು ಪಕ್ಷದ ಕಾರ್ಯಕರ್ತರ ಸಹಕಾರ ಬಹಳಷ್ಟು ಮುಖ್ಯವಾಗಿದೆ.
ಸಾರ್ವಜನಿಕರು ಮನೆಯಲ್ಲಿ ಕುಳಿತುಕೊಂಡು ವೋಟರ್ಸ್ ಹೆಲ್ಪಲೈನ್ ಆ್ಯಾಪ್ ಡೌನ್ ಲೋಡ್ ಮಾಡಿಕೊಂಡು ತಾವೇ ನೊಂದಣಿ ಮಾಡಿಕೊಳ್ಳಬಹುದಾಗಿದೆ ಇಲ್ಲದೆ ಇದ್ದರೆ ಮನೆಗೆ ಬರುವ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ದಾಖಲೆಯನ್ನು ನೀಡುವುದರ ಮೂಲಕ ನೊಂದಣಿ ಮಾಡಿಕೊಳ್ಳಬಹುದಾಗಿದೆ.
ಈ ಕಾರ್ಯದಿಂದ ಮತದಾರರ ಪಟ್ಟಿಯಲ್ಲಿ ಅನಧಿಕೃತ ವ್ಯಕ್ತಿಗಳನ್ನು ತೆಗೆದು ಹಾಕಬಹುದಾಗಿದೆ. ಇನ್ನೂ ಕೆಲವರ ಹೆಸರುಗಳು ಎರಡು ಕಡೆಗಳಲ್ಲಿ ಇರುತ್ತವೆ. ಈ ಎಲ್ಲ ದೋಷಗಳನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಸಂಜಯ ಎಸ್.ಬಿ.ಇಂಗಳೆ ತಿಳಿಸಿದರು.

Social Plugin