ರಾಗಿಣಿ ಪ್ರಜ್ವಲ್ "ಶಾನುಭೋಗರ ಮಗಳಾ"ಗಿ ಕಾಣಿಸಿಕೊಳ್ಳುತ್ತಿದ್ದು, ಮೇಘಶ್ರೀ, ನಿರಂಜನ್ ಶೆಟ್ಟಿ, ರಮೇಶ್ ಭಟ್, ಸುಧಾ ಬೆಳವಾಡಿ, ಭಾಗ್ಯಶ್ರೀ,ಟಿ.ಎನ್.ಶ್ರೀನಿವಾಸಮೂರ್ತಿ, ಟೆನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಈ ಚಿತ್ರದ ಚಿತ್ರೀಕರಣ ಅಕ್ಟೋಬರ್ 5ರ ವಿಜಯದಶಮಿ ಶುಭದಿನದಂದು ಚನ್ನಪಟ್ಟಣದ ಅರಳಾಳು ಸಂದ್ರದಲ್ಲಿ
ಆರಂಭವಾಗಲಿದೆ. ಆನಂತರ ಶ್ರೀರಂಗಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟ, ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಭುವನ್ ಫಿಲಂಸ್ ಲಾಂಛನದಲ್ಲಿ ನಾರಾಯಣ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಕೋಡ್ಲು ರಾಮಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದು ಕೋಡ್ಲು ರಾಮಕೃಷ್ಣ ನಿರ್ದೇಶನದ ಹದಿನಾಲ್ಕನೇ ಕಾದಂಬರಿ ಆಧಾರಿತ ಚಿತ್ರ. ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ.

Social Plugin