"MOCOBOT" ಕ್ಯಾಮೆರಾ ಬಳಸಿ ಈ ಹಾಡಿನ ಚಿತ್ರೀಕರಣ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ - ನಾಯಕಿಯಾಗಿ ನಟಿಸಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಹಾಡೊಂದರ ಚಿತ್ರೀಕರಣದೊಂದಿಗೆ ಮುಕ್ತಾಯವಾಗಿದೆ. ಅಂಡರ್ ವಾಟರ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.
ಈ ಹಾಡಿನ ಚಿತ್ರೀಕರಣಕ್ಕಾಗಿ " "ಮೋಕೊ ಬೋಟ್" ಕ್ಯಾಮರಾ ಬಳಸಲಾಗಿದೆ. ನನಗೆ ತಿಳಿದ ಕನ್ನಡ ಚಿತ್ರರಂಗದಲ್ಲಿ ಹಾಡೊಂದರ ಚಿತ್ರೀಕರಣಕ್ಕಾಗಿ ಈ ಕ್ಯಾಮೆರಾ ಬಳಸಿರುವುದು ಇದೇ ಮೊದಲು ಎನ್ನುತ್ತಾರೆ ನಿರ್ದೇಶಕ ನವೀನ್ ದ್ವಾರಕನಾಥ್. ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು ಈ ಹಾಡನ್ನು ಅದ್ಭುತವಾಗಿ ಸೆರೆ ಹಿಡಿದಿದ್ದಾರೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನವಿರುವ ಈ ಹಾಡಿನಲ್ಲಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯಿಸಿದ್ದಾರೆ. ಇತ್ತೀಚಿಗೆ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲಿ ಈ ಚಿತ್ರ(2023 ರ ಫೆಬ್ರವರಿ 10) ತೆರೆಗೆ ಬರುತ್ತಿದೆ. ನಿಶ್ಚಲ್ ಫಿಲಂಸ್ ಮೂಲಕ
ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ. ಪೃಥ್ವಿ ಅಂಬರ್, ಮಿಲನ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ.

Social Plugin