THE BLACK PEBBLE ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ನಿರ್ಮಿಸಿರುವ "ಖೆಯೊಸ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಹಾಗೂ ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ ಈ ಚಿತ್ರದ ನಾಯಕ - ನಾಯಕಿಯಾಗಿ ಅಭಿನಯಿಸಿದ್ದಾರೆ. ಶಶಿಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದು, ತಂದೆ - ಮಗ ಇಬ್ಬರೂ ಒಟ್ಟಿಗೆ ಅಭಿನಯಿಸಿರುವ ಮೊದಲ ಚಿತ್ರವಿದು. ಆರ್ ಕೆ ಚಂದನ್, ಸಿದ್ದು ಮೂಲಿಮನಿ ಮೊದಲಾದವರು ,ತಾರಾಬಳಗದಲ್ಲಿದ್ದಾರೆ.
ಇದೊಂದು ಮೆಡಿಕಲ್ ಕಾಲೇಜಿನಲ್ಲಿ ನಡೆಯುವ ಕಥೆ. ಆಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜೊತೆಗೆ ಮರ್ಡರ್ ಮಿಸ್ಟರಿ ಜಾನರ್ ಎನ್ನಬಹುದು. ಮನಸ್ಸಿನಲ್ಲಾಗುವ ಗೊಂದಲ, ಅಸ್ತವ್ಯಸ್ತ ಇವುಗಳಿಗೆ "ಖೆಯೊಸ್" ಎನ್ನುತ್ತಾರೆ. ಫೆಬ್ರವರಿ 17 ಚಿತ್ರ ತೆರೆಗೆ ಬರಲಿದೆ. ಜನವರಿ 26 ರಂದು "ಖೆಯೊಸ್" ಚಿತ್ರದ ತುಣುಕು ಬಿಡುಗಡೆಯಾಗಲಿದೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ದೇಶಕ ಜಿ.ವಿ.ಪ್ರಸಾದ್.

Social Plugin