ರಮೇಶ್ ರೆಡ್ಡಿ ನಿರ್ಮಾಣದ ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆ* .
"ನಾತಿಚರಾಮಿ", " ಗಾಳಿಪಟ ೨" ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ "45" ಪ್ಯಾನ್ ಇಂಡಿಯಾ ಚಿತ್ರವನ್ನು ಖ್ಯಾತ ಸಂಗೀತ ಸಂಯೋಜಕ ಅರ್ಜುನ್ ಜನ್ಯ ನಿರ್ದೇಶಿಸುತ್ತಿದ್ದಾರೆ. ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಮೂವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಹತ್ವಾಕಾಂಕ್ಷೆಯ ಈ ಚಿತ್ರಕ್ಕೆ ಚಿತ್ರತಂಡ ನಾಯಕಿಯ ಹುಡುಕಾಟ ನಡೆಸುತ್ತಿದೆ. ನಾಯಕಿಯ ಪಾತ್ರಕ್ಕೆ ಕನ್ನಡ ಬರುವವರಿಗೆ ಮೊದಲ ಆದ್ಯತೆ. ಆಸಕ್ತಿ ಇರುವವರು ತಮ್ಮ ಇತ್ತೀಚಿನ ಎಡಿಟ್ ಮಾಡದ ಫೋಟೊ ಹಾಗೂ ಚಿಕ್ಕ ವಿಡಿಯೋ ತುಣುಕನ್ನು 45kannadamovie@gmail.com ಗೆ ಕಳುಹಿಸಬಹುದು.

Social Plugin