ದಕ್ಷಿಣ ಭಾರತದ ಖ್ಯಾತ ನಟ ಶರತ್‌ ಬಾಬು ನಿಧನರಾಗಿದ್ದಾರೆ‌. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 74 ವರ್ಷ ವಯಸ್ಸಾಗಿತ್ತು . ಶರತ್‌ ಬಾಬು ಅವರನ್ನು ಹೈದರಾಬಾದ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು . ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಕನ್ನಡ, ತೆಲುಗು , ತಮಿಳು, ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು . ಶರತ್‌ ಬಾಬು ಅವರ ಅಗಲಿಕೆಯ ಹಿನ್ನೆಲೆಯಲ್ಲಿ ಹಲವು ಗಣ್ಯರು , ಕಲಾಭಿಮಾನಿಗಳು ಕಂಬನಿ ಮಿಡಿದಿದ್ದಾರೆ.