ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. "ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು. ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್‍ಭಟ್, ಸುಧಾಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್. ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಧಾನ ಪಾತ್ರದಲ್ಲಿದ್ದಾರೆ.

Social Plugin