ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ " ಸಪ್ತ ಸಾಗರದಾಚೆ ಎಲ್ಲೋ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾದರೆ, ಸೈಡ್ 2 ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.
ಹೇಮಂತ್ ಎಂ ರಾವ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ಹೇಮಂತ್ ಎಂ ರಾವ್ ಕಾಂಬಿನೇಶನ್ ನಲ್ಲಿ ಬರುತ್ತಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿ ವಲಯ ಕಾತುರದಿಂದ ಕಾಯುತ್ತಿದೆ.
ಸದ್ಯ ಈ ಚಿತ್ರಕ್ಕಾಗಿ ಎಂ.ಸಿ.ಬಿಜ್ಜು ಹಾಗೂ ಕಿರಣ್ ಕಾವೇರಪ್ಪ ಬರೆದಿರುವ "ಹೋರಾಟ" ಎಂಬ ಹಾಡಿನ ಲಿರಿಕಲ್ ವಿಡಿಯೋ ಪರಂವಃ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಎಂ.ಸಿ.ಬಿಜ್ಜು(ರಾಪರ್) ಹಾಗೂ ಕೀರ್ತನ್ ಹೊಳ್ಳ ಹಾಡಿರುವ ಈ ಹಾಡು ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು.

Social Plugin