ಡಾ||ವಿ.ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದರು "ನಿರ್ಭಯ 2" ಚಿತ್ರದ ಮೋಷನ್ ಪೋಸ್ಟರ್. ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್ 
ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶ್ರೀ ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ರವರು ಮಾತನಾಡಿ ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣಿನ ಮೇಲಿನ ದೌರ್ಜನ್ಯ ಪ್ರಮುಖವಾಗಿ ಅತ್ಯಾಚಾರ ಈ ಎಲ್ಲಾ ಶೋಷಣೆಗಳು ಕಡಿಮೆಯಾಗಲಿ ಅಂತ್ಯವಾಗಲಿ ಎಂದು ಹರಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.ಶ್ರಾವ್ಯ ರಾವ್ (ಸಾತ್ವಿಕ) ತಾರಾಗಣದಲ್ಲಿ ಅರ್ಜುನ್ ಕೃಷ್ಣ, ಕುಸುಮ, ಹರೀಶ್ ಜಲೀಲ ಮುಂತಾದವರಿದ್ದಾರೆ. 
ತುಮಕೂರು, ಬೆಂಗಳೂರು ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಹೆಣ್ಣಿನ ಮೇಲಿನ ಶೋಷಣೆಗಳನ್ನು ತಡೆಯುವಂತ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ರಾಜು ಕುಣಿಗಲ್ ಅವರೆ ಕಥೆ ಚಿತ್ರಕಥೆ ಬರೆದಿದ್ದಾರೆ. ಆಕಾಶ್ ಪರ್ವ ಸಂಗೀತ ನೀಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.