ಈ ಶುಕ್ರವಾರ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಗೆ ಸಂಭ್ರಮದ ಶುಕ್ರವಾರ. ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡಿರುವ ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಿಸಿ, ನಿರ್ದೇಶಿಸಿರುವ "12th ಫೇಲ್" ಹಾಗೂ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಧನಂಜಯ ಅವರು ನಿರ್ಮಿಸಿರುವ "ಟಗರು ಪಲ್ಯ" ಎರಡು ಚಿತ್ರಗಳು ಈ ವಾರ ಬಿಡುಗಡೆಯಾಗಿದ್ದು, ಎರಡೂ ಚಿತ್ರಗಳಿಗೂ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎರಡು ಚಿತ್ರಗಳು ಹೌಸ್ ಫುಲ್ ಆಗುತ್ತಿದೆ. ಈ ಕುರಿತು ಸಂತಸ ವ್ಯಕ್ತಪಡಿಸಿರುವ ಕೆ.ಆರ್.ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಮುಂದೆ ಕೂಡ ನಮ್ಮ ಸಂಸ್ಥೆಯ ಮೂಲಕ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸುತ್ತೇವೆ ಹಾಗೂ ವಿತರಣೆ ಮಾಡುತ್ತೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಿಳಿಸಿದ್ದಾರೆ.

Social Plugin