ಈ ರಿಯಾಲಿಟಿ ಶೋ ನ ಆಡಿಷನ್ ನಲ್ಲಿ ಸುಮಾರು 2000 ಜನ ಪಾಲ್ಗೊಂಡಿದ್ದರು.
ಅದರಲ್ಲಿ ಸುಮಾರು 100 ಕೆಜಿ ಗಿಂತ ಹೆಚ್ಚು ತೂಕವಿರುವ 21 ಜನರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಇಪ್ಪತ್ತೊಂದು ದಿನ ,ತಮ್ಮ ದೇಹದ ಅತಿಯಾದ ತೂಕವನ್ನು ಕಡಿಮೆ ಮಾಡಲು ಇಲ್ಲಿ ಪಾಲ್ಗೊಂಡಿದ್ದು ವಿಶೇಷ, ತಮ್ಮ ಆರೋಗ್ಯದ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ಕ್ಯೂರ್ ಮಾಡಿಕೊಳ್ಳುವುದರ ಜೊತೆಗೆ ಆಟ, ಮೋಜು, ಮಸ್ತಿ, ಮತ್ತು ಸ್ನೇಹ ಸಂಬಂಧಗಳ ಮೌಲ್ಯಗಳನ್ನು ಈ ರಿಯಾಲಿಟಿ ಶೋ ನಲ್ಲಿ ಕಲಿತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್, ಅಮೂಲ್ಯ, ರೂಪಿಕಾ, ನಿರೂಪಕ ಮುರಳಿ, ಆರ್ಯನ್ ಶಾಮ್ ಮುಂತಾದ ಗಣ್ಯರು ಗ್ರ್ಯಾಂಡ್ ಫಿನಾಲೆಗೆ ಆಗಮಿಸಿ ಸ್ಪರ್ಧಿಗಳಿಗೆ ಶುಭ ಕೋರಿದ್ದಾರೆ. ಗೆದ್ದ ಸ್ಪರ್ಧಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು "ಫಿಟ್ ಬಾಸ್" ರಿಯಾಲಿಟಿ ಶೋ ನಿರ್ದೇಶಕ ಬಾಲಕೃಷ್ಣ ತಿಳಿಸಿದರು. 21 ದಿನಗಳಕಾಲ ಪ್ರತಿ ದಿನ ಮುಂಜಾನೆ 5 ರಿಂದ ಯೋಗದೊಂದಿಗೆ ಸಾಧಕರ ದಿನಚರಿ ಪ್ರಾರಂಭವಾದರೆ ಕ್ರಮೇಣ ವಿವಿಧ ನ್ಯಾಚುರೋಪತಿ ಚಿಕಿತ್ಸೆಗಳು ಹಾಗೂ ಹಲವು ಮನೋರಂಜನಾ ಕಾರ್ಯಕ್ರಮಗಳು ಸ್ಪರ್ಧಿಗಳನ್ನು ಕ್ರಿಯಾಶೀಲರನ್ನಾಗಿಸಿರುವಂತೆ ಮಾಡಿದ್ದವು ಎಂಬ ಮಾಹಿತಿಯನ್ನು "ಕ್ಷೇಮವನ"ದ ಮುಖ್ಯ ಕ್ಷೇಮಾಧಿಕಾರಿ ಡಾ||ನರೇಂದ್ರ ಶೆಟ್ಟಿ ನೀಡಿದರು. " ಫಿಟ್ ಬಾಸ್" ರಿಯಾಲಿಟಿ ಶೋ ನ ಆರಂಭದ ದಿನ ಹಾಗೂ ಫಿನಾಲೆ ದಿನ ನಿರೂಪಕನಾಗಿ ಕೆಲಸ ಮಾಡಿದ್ದು ಖುಷಿಯಾಗಿದೆ. ಇಂತಹ ಕಾರ್ಯಕ್ರಮಗಳನ್ನು ಎಲ್ಲರೂ ನೋಡಬೇಕೆಂದರು ಪ್ರಶಾಂತ್ ಸಂಬರ್ಗಿ. "ಫಿಟ್ ಬಾಸ್" ಕಾರ್ಯಕ್ರಮದ ಬಗ್ಗೆ ಆಯೂಷ್ ಟಿವಿಯ ದಿವ್ಯ ಅವರು ಮಾತನಾಡಿದರು. ಹರಿಕೃಷ್ಣ, ವ್ಯವಸ್ಥಾಪಕ ನಿರ್ದೇಶಕರು ಆಯುಷ್ ಟಿ ವಿ,
ಸಂಜಯ್ ಶಿಂಧೆ, ಸಂಸ್ಥಾಪಕ ನಿರ್ದೇಶಕರು ಸಿರಿ ಕನ್ನಡ ವಾಹಿನಿ. ಪ್ರಶಾಂತ್ ಸಂಬರ್ಗಿ, ಕಲಾವಿದರು ಹಾಗೂ ಫಿಟ್ ಬಾಸ್ ಗ್ರ್ಯಾಂಡ್ ಫಿನಾಲೆ ನಿರೂಪಕರು. ಬಾಲಕೃಷ್ಣ, ಫಿಟ್ ಬಾಸ್ ರಿಯಾಲಿಟಿ ಷೋ ನಿರ್ದೇಶಕರು. ಅರುಣಾಚಲಂ , ವೈಸ್ ಚೇರ್ಮನ್ ಆಯುಷ್ ಟಿವಿ ಅರವಿಂದ್ ಎನ್.ಜೆ , ಪವನ್ ಕುಮಾರ್ , ವಿನಾಯಕ್ ಪೈ , ದಿವ್ಯ(ಆಯೂಷ್ ಟಿವಿ), ರಾಜೇಶ್ ರಾಜಘಟ್ಟ ಮುಖ್ಯಸ್ಥರು , ಸಿರಿ ಕನ್ನಡ ವಾಹಿನಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Social Plugin