ಹೊಸತಂಡದ ಹೊಸಪ್ರಯತ್ನಕ್ಕೆ ಬೆಂಬಲ ನೀಡಿದ್ದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಚಿತ್ರತಂಡ ಧನ್ಯವಾದ ಹೇಳುವುದರೊಂದಿಗೆ, ಹುಟ್ಟುಹಬ್ಬದ(ಅಕ್ಟೋಬರ್ 8) ಶುಭಾಶಯವನ್ನು ತಿಳಿಸಿದೆ. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಚಿತ್ರ. ಸೂರ್ಯ ಗೌಡ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಶ್ವಿನಿ ಪೋಲೆಪಲ್ಲಿ. ಅಪ್ಪಣ್ಣ, ಅಭಿಜಿತ್, ಮೀನಾಕ್ಷಿ, ಬಾಲ ರಾಜವಾಡಿ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ ಹಾಗೂ ಸುಚೇಂದ್ರ ಎನ್ ಮೂರ್ತಿ ಸಂಕಲನ "ಆಪಲ್ ಕಟ್" ಚಿತ್ರಕ್ಕಿದೆ.

Social Plugin