ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

Social Plugin