ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, "ವಿಕ್ರಾಂತ್ ರೋಣ" ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ "ಲವ್ ಮಾಕ್ಟೇಲ್" ಖ್ಯಾತಿಯ ರೆಚೆಲ್ ಡೇವಿಡ್ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು "chef ಚಿದಂಬರ" ಚಿತ್ರದ ತಾರಾಬಳಗದಲ್ಲಿದ್ದಾರೆ.

Social Plugin