ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬನಿತಾ, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ ಕೈ ಜೋಡಿಸಿರುವುದಕ್ಕೆ ಉತ್ಸುಕಳಾಗಿದ್ದೇನೆ. ನಾನು ಹಿಂದೆಂದೂ ಮಾಡದಿರುವ ವಿಭಿನ್ನ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ. ಪ್ರೇಕ್ಷಕರು ನನ್ನನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ನೋಡುತ್ತಾರೆ. ಈ ಚಿತ್ರದಲ್ಲಿ ಕೆಲಸ ಮಾಡಲು ನಾನು ಎಕ್ಸೈಟ್ ಆಗಿದ್ದೇನೆ ಎಂದಿದ್ದಾರೆ. ಅಡಿವಿ ಶೇಷ್ ಮಾತನಾಡಿ, ಗೂಢಚಾರಿ ಪ್ರಪಂಚಕ್ಕೆ ಬಬಿತಾ ಅವರಿಗೆ ಸ್ವಾಗತ..ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
‘ಗೂಢಚಾರಿ 2’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದೆ. ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ 2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ಗೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Social Plugin