#AskSRK ನಲ್ಲಿ ಕಿಂಗ್ ಖಾನ್ ತಮ್ಮ ನೆಚ್ಚಿನ ಹಾಡು ಇದೇ ಎಂದು ಹೇಳಿಕೊಂಡಿದ್ದರು. ಹೀಗಾಗಿ ಫ್ಯಾನ್ಸ್ ಎಕ್ಸೈಟ್ ಆಗಿದ್ದರು. ಇದೀಗ ಆ ಕುತೂಹಲಕ್ಕೆ ತೆರೆಬಿದ್ದಿದೆ. ಓಮಾಹಿ ಹಾಡು ನೋಡಿ ಕಿಂಗ್ ಫ್ಯಾನ್ಸ್ ಖುಷಿಯಾಗಿದ್ದಾರೆ.
ಅಂದಹಾಗೇ ಡಂಕಿ ಸಿನಿಮಾಗೆ ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

Social Plugin