ಶ್ರೀಯಾ ಶುಕ್ಲ ಹಾಗೂ ಅಜಿತಾ ಅಭಿನಯಿಸಿದ್ದಾರೆ. ಹಿರಿಯ ನಟಿ ಭವ್ಯ ಸಹ ಮುಖ್ಯಪಾತ್ರದಲ್ಲಿದ್ದಾರೆ. ಬಾಲಿವುಡ್ ನ ಖ್ಯಾತ ನಟರಾದ ಅಮಿತಾಬ್ ಬಚ್ಚನ್, ಶಾರುಕ್ ಖಾನ್, ಅಮೀರ್ ಖಾನ್ ಮುಂತಾದವರ ಚಿತ್ರಗಳಲ್ಲಿ ನಟಿಸಿರುವ ಶಿವ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಅಧಿಕಾರಿ ಪಾತ್ರ ನಿರ್ವಹಿಸಿದ್ದಾರೆ.
ಇಶಾಕ್ ಕಾಝಿ, ಸತ್ಯಜಿತ್, ಮಾಸ್ಟರ್ ಸಿದ್ ಟೈನ್, ಶಿವ, ರಾಜ ದೀಪ್, ಕಿಲ್ಲರ್ ವೆಂಕಟೇಶ್, ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ."ಬುಲೆಟ್" ಚಿತ್ರಕ್ಕೆ ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿದೆ. ಮೂರು ಹಾಡುಗಳಿದ್ದು ರಾಜ್ ಭಾಸ್ಕರ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ಸಂಕಲನ ಹಾಗೂ ಅಲ್ಟಿಮೇಟ್ ಶಿವು, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. "ಬುಲೆಟ್" ಎಂದರೆ ವಾಹನವಲ್ಲ. ಬಂದೂಕಿನ ಒಳಗಿರುವ "ಬುಲೆಟ್" ಇದು ಎಂದು ಚಿತ್ರತಂಡ ಮಾಹಿತಿ ನೀಡಿದೆ.

Social Plugin