ಆಲ್ಬಮ್ ಸಾಂಗ್ಸ್ ಮತ್ತು ಕಿರುಚಿತ್ರದ ಮೂಲಕ ಗುರಿತಿಸಿಕೊಂಡಿದ್ದ ಎನ್ ವಿನಾಯಕ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದು, ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಮುಗಿದಿದ್ದು ಸಿನೆಮಾ ಜನರಿಗೆ ಇಷ್ಟವಾಗುವ ಭರವರಸೆಯನ್ನು ಹೊಂದಿದ್ದಾರೆ. ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಜೊತೆಯಾಗಿದ್ದಾರೆ. ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ. ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ಚಿತ್ರಕ್ಕಿದೆ. ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.
‘ಸಂಕಷ್ಟ ಕರ ಗಣಪತಿ’ ಮತ್ತು “ಫ್ಯಾಮಿಲಿ ಪ್ಯಾಕ್’ ಎರಡೂಚಿತ್ರಗಳಲ್ಲಿ ಯಶಸ್ಸನ್ನು ಕಂಡಿದ್ದ ನಾಯಕ ಲಿಖಿತ್ ಶೆಟ್ಟಿ, ‘ಫುಲ್ ಮೀಲ್ಸ್’ ನಲ್ಲೂ ತಮ್ಮ ಯಶಸ್ಸಿನ ಪಯಣವನ್ನು ಮುಂದುವರೆಸುವ ನಿರೀಕ್ಷೆಯಲ್ಲಿದ್ದಾರೆ.

Social Plugin