ಸಂಕ್ರಾಂತಿ ಹಬ್ಬಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ಬಿಡುಗಡೆ.ದಿನಕರ್ ತೂಗುದೀಪ ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿತ್ತು. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದೆ. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ.
Social Plugin