ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್.ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Social Plugin