ನಿರ್ಮಾಪಕ ಜಯರಾಮ್ ದೇವಸಮುದ್ರ ಮಾತನಾಡಿ, ಪ್ರವೀಣ್ ಶೆಟ್ಟಿ ಅವರಿಗೋಸ್ಕರ್ ಈ ಪ್ರಾಜೆಕ್ಟ್ ಗೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್ ಕಥೆ ಹೇಳಿದಾಗ ಫಸ್ಟ್ ಇಂಪ್ರೆಷನ್ ನಲ್ಲಿಯೇ ಇಷ್ಟವಾಯ್ತು. ಪ್ರತಿಯೊಬ್ಬರು ಲೈಫ್ ನಲ್ಲಿ ನಡೆಯುವ ಕೆಲ ಘಟನೆಗಳು ಜೀವನದಲ್ಲಿವೆ. ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ ಎಂದು ತಿಳಿಸಿದರು. ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ ಎಂದರು.ನಾಯಕಿ ರಿಷಿಕಾ ನಾಯಕ್ ಮಾತನಾಡಿ, ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು. ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.ಯುರೋಪ್ ನ ಪ್ರೇಗ್ ಫಿಲ್ಮ್ ಸ್ಕೂಲ್ನಲ್ಲಿ ನಿರ್ದೇಶಕ ಪಟು ಕಲಿತಿರುವ ಸುರಾಗ್ ಸಾಗರ್ ಎಂಟ್ರೋಪಿ ಕಿರುಚಿತ್ರದ ಮೂಲಕ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇದೀಗ ಸುರಾಗ್ ’ನಿದ್ರಾದೇವಿ Next Door’ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಗಳದಲ್ಲಿ ಇದ್ದಾರೆ.
ರಾಜು ಬೋನಗಾನಿ ಅವರ ರೋಡಿಯಂ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ ಸೂರಂ ಮೂವೀಸ್ ಬ್ಯಾನರ್ನಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿರುವ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ. ಈ ತಿಂಗಳಾತ್ಯಂತಕ್ಕೆ ’ನಿದ್ರಾದೇವಿ Next Door’ ತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

Social Plugin