ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ ಚಿತ್ರಗಳು ಸಂಕ್ರಾಂತಿ ಸಮಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆಯಾಗಿಲ್ಲ. ಬಹಳ ವರ್ಷಗಳ ನಂತರ ಕನ್ನಡದ "ಛೂ ಮಂತರ್" ಚಿತ್ರವನ್ನು ಸಂಕ್ರಾಂತಿ ಸಮಯಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಬಿಡುಗಡೆ ಮಾಡುತ್ತಿದ್ದಾರೆ.

Social Plugin